ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ.
ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ ಹಳೆಯ ಬೇವಿನ ಮರ ಏಕಾಏಕಿ ನೆಲಕ್ಕುರಳಿದೆ. ಮೂರ‍್ನಾಲ್ಕು ದಿನಗಳ ಹಿಂದೆ ಧಾರಕಾರ ಮಳೆ ಬಿದ್ದಿದ್ದರಿಂದ ಮರದ ಬೇರುಗಳು ಸಡಿಲಗೊಂಡಿದ್ದವು. ಇದರಿಂದ ಭಾರ ತಾಳಲಾದರೆ, ಚಿಗುರಿ ಹಸಿರಾಗಿದ್ದ ಮರ ನೆಲಕ್ಕುರಿಳಿದಿದೆ.
ಮಧ್ಯಾಹ್ನ 3.30ರ ಸಮಯದಲ್ಲಿ ಘಟನೆ ನಡೆದಿದ್ದು, ಪಕ್ಕದಲ್ಲೆ ಇದ್ದ ಕಾಂಪೌಂಡ್ ಉರುಳಿದೆ. ಕಾಂಪೌಂಡ್ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿತು. ಮರ ಬಿದ್ದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್‌ನಲ್ಲಿ ಸವಾರರೊಬ್ಬರು ರಸ್ತೆಯಲ್ಲಿ ಸಾಗುವಾಗ, ಮರದ ರೆಂಬೆಕೊಂಬೆಗಳು ತಾಗಿ ಬೈಕ್ ಮೇಲೆ ಬಿದ್ದಿವೆ. ಸವಾರರಿಗೆ ತಲೆಗೆ ಸಣ್ಣ ಗಾಯವಾಗಿದ್ದು, ಕೂಡಲೇ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಹೊಸ ಸ್ವಿಫ್ಟ್ ಕಾರ್‌ನ ಮೇಲೆ ದಿಢೀರನೆ ಮರಬಿದ್ದಿದೆ. ಬಿದ್ದ ರಬಸಕ್ಕೆ ಕಾರ್ ಮೇಲ್ಬಾಗ, ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಕಾರಿನ ಎಲ್ಲ ಗ್ಲಾಸ್‌ಗಳು ಪುಡಿಪುಡಿಯಾಗಿವೆ.
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಮರದ ಕೆಳಭಾಗದಲ್ಲಿ ವಿದ್ಯುತ್ ಕಂಬಗಳಿದ್ದು, ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾದ ಪರಿಣಾಮ ತಕ್ಷಣವೇ ವಿದ್ಯುತ್ ವ್ಯತ್ಯಯವಾಗಿದ್ದು, ಭಾರಿ ಅನಾಹುತ ತಪ್ಪಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿ, ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು. ವಿಷಯ ತಿಳಿದು ಕೂಡಲೇ ಸಂಚಾರ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು. ಮಹಾನಗರ ಪಾಲಿಕೆ ಸಿಬ್ಬಂದಿ ಜೆಸಿಬಿ ಹಾಗೂ ಮಷಿನ್ ಮೂಲಕ ಮರ ತುಂಡರಿಸಿ ಮರ ತೆರವುಗೊಳಿಸಿದರು. ಬಳಿಕ ವಾಹನ ಸವಾರರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ವಾರಂತ್ಯದಲ್ಲಿ ಅಪಾರ ಜನಸಂದಣಿಯಿದ್ದರು, ಯಾವುದೇ ಪ್ರಾಣಹಾನಿಯಾಗಿಲ್ಲ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…