Mysore
22
broken clouds
Light
Dark

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವಯೋಮಿತಿ ಆಯಾ ವರ್ಗಗಳಿಗೆ ಒಂದೊಂದು ರೀತಿ ಇದೆ. ಎಲ್ಲಾ ರಾಜ್ಯಗಳಲ್ಲೂ ೩೦ ರಿಂದ ೩೫ ವರ್ಷದ ಇದೆ. ಆದರೆ, ನಮ್ಮ ರಾಜ್ಯದಲ್ಲಿ ೨೭ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ. ಇದರಿಂದ ಯುವಕರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಇರುವ ವಯೋಮಿತಿ ಸಡಿಲಗೊಳಿಸಿ ಸಾಮಾನ್ಯ ವರ್ಗಕ್ಕೆ ೩೦, ಪ.ಜಾ, ಪ.ಪಂ ವಿದ್ಯಾರ್ಥಿಗಳಿಗೆ ೩೩ ವರ್ಷಕ್ಕೆ ಏರಿಕೆ ಮಾಡಬೇಕು. ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿಯೇ ನಡೆದಿಲ್ಲ. ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.