ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವಯೋಮಿತಿ ಆಯಾ ವರ್ಗಗಳಿಗೆ ಒಂದೊಂದು ರೀತಿ ಇದೆ. ಎಲ್ಲಾ ರಾಜ್ಯಗಳಲ್ಲೂ ೩೦ ರಿಂದ ೩೫ ವರ್ಷದ ಇದೆ. ಆದರೆ, ನಮ್ಮ ರಾಜ್ಯದಲ್ಲಿ ೨೭ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ. ಇದರಿಂದ ಯುವಕರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಇರುವ ವಯೋಮಿತಿ ಸಡಿಲಗೊಳಿಸಿ ಸಾಮಾನ್ಯ ವರ್ಗಕ್ಕೆ ೩೦, ಪ.ಜಾ, ಪ.ಪಂ ವಿದ್ಯಾರ್ಥಿಗಳಿಗೆ ೩೩ ವರ್ಷಕ್ಕೆ ಏರಿಕೆ ಮಾಡಬೇಕು. ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿಯೇ ನಡೆದಿಲ್ಲ. ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯ ಮಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…