ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಖುದ್ದು ಭೇಟಿ ನೀಡಿ ವೀಕ್ಷಿಸಿದರು.
ಮೇಲ್ಸೇತುವೆ ಕಾಮಗಾರಿಗೆ ಬನ್ನಿಮಂಟಪ ರಸ್ತೆ, ನಂಜನಗೂಡು ರಸ್ತೆ, ಫೌಂಟನ್ ರಸ್ತೆ, ಹುಣಸೂರು ರಸ್ತೆಗಳ ವಿಭಜಕದೊಳಗೆ ಬೆಳೆಸಲಾಗಿರುವ ಮತ್ತು ಎಡ ಮತ್ತು ಬಲಬದಿಯ ಕೆಲವು ಮರ ಸೇರಿ ಒಟ್ಟು 347 ಮರಗಳು ಅಡ್ಡಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
ಬೀಟೆ, ರೈನ್ ಟ್ರೀ, ಹೊಂಗೆ, ಆಕಾಶ ಮಲ್ಲಿಗೆ, ಗಸಗಸೆ, ಮಹಾಗನಿ, ಮಾವು, ಬೇವು ಸೇರಿದಂತೆ ವಿವಿಧ ಮರಗಳನ್ನು ಕಾಮಗಾರಿಗಾಗಿ ತೆಗೆಯಬೇಕಾಗುತ್ತದೆ. ಹೀಗಾಗಿ ಎಷ್ಟು ಮರಗಳನ್ನು ಉಳಿಸಬಹುದು, ಬೀಟೆ, ಇತ್ಯಾದಿ ಮರಗಳನ್ನು ಸ್ಥಳಾಂತರಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.
ಈ ಭೇಟಿಯ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಮತ್ತಿತರರು ಹಾಜರಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…