ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಲಾಗದಷ್ಟು ದಿವಾಳಿಯಾಗಿದೆ. ಕಳೆದ ನಾಲ್ಕು ತಿಂಗಳಿಂದ ಗೃಹಲಕ್ಷ್ಮಿ ಹಣ ಕೊಟ್ಟಿಲ್ಲ. ಈ ಕೂಡಲೇ ಹಣ ಬಿಡುಗಡೆ ಮಾಡಬೇಕು. ಜೊತೆಗೆ ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ನಗರದ ಘಟಕದ ಅಧ್ಯಕ್ಷ ಚಲುವೇಗೌಡ, ಗ್ರಾಮಾಂತರ ಅಧ್ಯಕ್ಷ ನರಸಿಂಹಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಕಾರ್ಪೋರೇಟರ್ ಶ್ರೀಧರ್, ಮಾಜಿ ಮೇಯರ್ ರವಿಕುಮಾರ್ ಸೇರಿದಂತೆ ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…