ಮೈಸೂರು: ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 17ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಜಿಲ್ಲೆ ಈ ವರ್ಷ 12ನೇ ಸ್ಥಾನಕ್ಕೆ ಜಿಗಿದಿದೆ.
ಈ ಕುರಿತು ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ ಮರಿಸ್ವಾಮಿ ಅವರು, ಈ ಬಾರಿ 31,510 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 23,485 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ಜಿಲ್ಲೆ 12ನೇ ಸ್ಥಾನಕ್ಕೆ ಜಿಗಿದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ವಾಣಿಜ್ಯ ವಿಭಾಗದಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿ ತೇಜಸ್ವಿನಿ ಎಂಬಾಕೆ 598 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಮೈಸೂರಿನ ಸದ್ವಿದ್ಯಾ ಪಿಯು ಕಾಲೇಜಿನಿ ಧಾತ್ರಿ ಜಿ ಎಂಬಾಕೆ 596 ಅಂಕ ಪಡೆದು ಎರಡನೇ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ 594 ಅಂಕಗಳೊಂದಿಗೆ ಎಸ್‌ವಿಸಿ ಜ್ಞಾನೋದಯ ಪಿಯು ಕಾಲೇಜಿನ ಎಸ್ ಅನಘ ಕರ್ನಿಸ್ ಹಾಗೂ ಬಿಜಿಎಸ್ ಪಿಯು ಕಾಲೇಜಿನ ಸಂಗೀತ ಎಸ್ ಎಂಬುವವರು ಸಮಪಾಲು ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಸೆಂಟ್ ಫಿಲೋಮೀನಸ್ ಕಾಲೇಜಿನ ಬಿಬಿ ಅಮಿನಾ 584 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ಟ್ಸ್ ವಿಭಾಗದಲ್ಲಿ ಮರಿಮಲ್ಲಪ್ಪ ಕಾಲೇಜಿನ ಎಸ್.ಪರೀಕ್ಷಾನಂದ 583 ಅಂಕಗಳನ್ನು ಪಡೆದು ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ ಮರಿಸ್ವಾಮಿ ಮಾಹಿತಿ ನೀಡಿದರು.





