ಮೈಸೂರು ನಗರ

ಪಿಯುಸಿ ಫಲಿತಾಂಶದಲ್ಲಿ 12ನೇ ಸ್ಥಾನಕ್ಕೆ ಜಿಗಿದ ಮೈಸೂರು

ಮೈಸೂರು: ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 17ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಜಿಲ್ಲೆ ಈ ವರ್ಷ 12ನೇ ಸ್ಥಾನಕ್ಕೆ ಜಿಗಿದಿದೆ.

ಈ ಕುರಿತು ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ ಮರಿಸ್ವಾಮಿ ಅವರು, ಈ ಬಾರಿ 31,510 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 23,485 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ಜಿಲ್ಲೆ 12ನೇ ಸ್ಥಾನಕ್ಕೆ ಜಿಗಿದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ವಾಣಿಜ್ಯ ವಿಭಾಗದಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿ ತೇಜಸ್ವಿನಿ ಎಂಬಾಕೆ 598 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಮೈಸೂರಿನ ಸದ್ವಿದ್ಯಾ ಪಿಯು ಕಾಲೇಜಿನಿ ಧಾತ್ರಿ ಜಿ ಎಂಬಾಕೆ 596 ಅಂಕ ಪಡೆದು ಎರಡನೇ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ 594 ಅಂಕಗಳೊಂದಿಗೆ ಎಸ್‌ವಿಸಿ ಜ್ಞಾನೋದಯ ಪಿಯು ಕಾಲೇಜಿನ ಎಸ್ ಅನಘ ಕರ್ನಿಸ್ ಹಾಗೂ ಬಿಜಿಎಸ್ ಪಿಯು ಕಾಲೇಜಿನ ಸಂಗೀತ ಎಸ್ ಎಂಬುವವರು ಸಮಪಾಲು ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಸೆಂಟ್ ಫಿಲೋಮೀನಸ್ ಕಾಲೇಜಿನ ಬಿಬಿ ಅಮಿನಾ 584 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ಟ್ಸ್ ವಿಭಾಗದಲ್ಲಿ ಮರಿಮಲ್ಲಪ್ಪ ಕಾಲೇಜಿನ ಎಸ್.ಪರೀಕ್ಷಾನಂದ 583 ಅಂಕಗಳನ್ನು ಪಡೆದು ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ ಮರಿಸ್ವಾಮಿ ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago