ಮೈಸೂರು ನಗರ

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಭಾನುವಾರ ತೆರೆಬಿದ್ದಿತು.

ಕರಗಕ್ಕೆ ವಿಶೇಷ ಪೂಜೆ
ಹಳದಿ ಸೀರೆ ಉಟ್ಟು, ಕಾಲುಂಗುರ, ಕಾಲಿಗೆ ಗೆಜ್ಜೆ, ಮಲ್ಲಿಗೆ ಹೂವಿನಿಂದ ಸುಂದರವಾಗಿ ಅಲಂಕೃತಗೊಂಡಿದ್ದ ಹೂವಿನ ಕರಗವನ್ನು ಹೊತ್ತು ಹೊರಬರುತ್ತಿದ್ದಂತೆ ನೆರೆದಿದ್ದ ಭಕ್ತರು ಚಪ್ಪಾಳೆಯೊಂದಿಗೆ ಬರಮಾಡಿಕೊಂಡಿತು. ಕರಗ ಸಾಗುವ ಹಾದಿಯುದ್ದಕ್ಕೂ ಭಕ್ತರು ಮಲ್ಲಿಗೆ ಹೂವಿನ ಮಳೆಗರೆಯುತ್ತಾ,ಹೂವಿನ ನೆಲಹಾಸು ನಿರ್ಮಿಸಿ ಭಕ್ತಿ ಸಮರ್ಪಿಸಿದರು.

ಪಲ್ಲಕ್ಕಿ ಮೆರವಣಿಗೆ
ಭಾನುವಾರ ಮುಂಜಾನೆಯಿಂದಲೇ ಅಭಿಷೇಕ, ಕುಂಕುಮಾರ್ಚನೆ ಹಾಗೂ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ತಮಟೆ ವಾದ್ಯದ ತಾಳಕ್ಕೆ ಕರಗ ನೃತ್ಯಗಳು ಭಕ್ತರನ್ನು ಆಕರ್ಷಿಸಿತು. ಕರಗ ಸಾಗುವ ಪ್ರಮುಖ ರಸ್ತೆಗಳಲ್ಲಿ ತಂಡೋಪತಂಡವಾಗಿ ಜಮಾಯಿಸಿದ್ದ ಜನರು, ತಮ್ಮ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಸ್ವಾಗತಿಸಿ ಮಹಿಳೆಯರು ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿ ಪೂಜೆ ಬಳಿಕ ಓಕುಳಿ ನೆರವೇರಿಸಿ ಭಕ್ತಿ ಸಾಗರದಲ್ಲಿ ಮಿಂದೆದ್ದರು.

ಕರಗ ಹೊರುವವರ ಪದ್ಧತಿ
ನಿತ್ಯವೂ ಹಾಲು, ಮಜ್ಜಿಗೆ ಹಾಗೂ ಸಾತ್ವಿಕ ಆಹಾರ ಸೇವಿಸುತ್ತಾರೆ. ಕರಗ ಹೊರುವ ದಿನ ದೇಹ ಶುದ್ದಿಯ ನಂತರ ಮೈತುಂಬಾ ಅರಿಶಿನ ಮೆತ್ತಿಕೊಂಡು, ಕಚ್ಚೆ ಧರಿಸಿ, ಕಂಕಣ ಕಟ್ಟಿಸಿಕೊಂಡು ಕಾಲಿಗೆ ಬೆಳ್ಳಿ ಗೆಜ್ಜೆ ಮತ್ತು ಕಾಲು ಮುರಿ ತೊಟ್ಟಿದ್ದು ಆಕರ್ಷಣೀಯವಾಗಿದ್ದು ಅತ್ಯಂತ ಶ್ರದ್ಧಾಭಕ್ತಿ ಯಿಂದ ಅಮ್ಮನವರ ಉತ್ಸವ ಮೂರ್ತಿಗಳನ್ನು ಹೊತ್ತು ಮೆರೆಸಿದರು.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago