ಮೈಸೂರು ನಗರ

ಮೈಸೂರು | ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಅಧಿಕಾರಿ ಮತ್ತು ಸಿಬ್ಬಂದಿ ಜನಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಆದ್ದರಿಂದ ಜನರನ್ನು ಅಲೆದಾಡಿಸಬಾರದು. ನಾವು ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಿ ಎಂದು ತಾಕೀತು ಮಾಡಿದರು.

ಇನ್ನು ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ‍್ತೀರಿ, ಇದು ಕೆಟ್ಟ ನಡವಳಿಕೆ, ನಾನು ಸಹಿಸಲ್ಲ ಎಂದು ಗರಂ ಆದರು.

ಇದನ್ನು ಓದಿ: ಕರ್ನಾಟಕದ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ: ಆರ್.‌ಅಶೋಕ್‌ ಆಕ್ರೋಶ

ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.

ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರುತ್ತಿದ್ದಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.

ಇದನ್ನು ಓದಿ: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್‌ ಆಪ್ತ ಧನ್ವೀರ್‌ ಸಿಸಿಬಿ ವಶಕ್ಕೆ

ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತೇನೆ ಎನ್ನುವ ಸೂಚನೆ ನೀಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್‌ ಸಿದ್ಧಪಡಿಸಿ ಎಂದರು,

ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ ಆದ ಸಿಎಂ ಬೇಗ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago