ಮೈಸೂರು ನಗರ

ಮೈಸೂರು | ಚಿರತೆ ಸೆರೆ ; ನಿಟ್ಟುಸಿರುಬಿಟ್ಟ ಕುಟುಂಬಸ್ಥರು

ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್‌ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಸುರೇಶ್ ಎಂಬುವವರ ಮನೆಗೆ ಏಕಾಏಕಿ ಚಿರತೆ ಪ್ರವೇಶಿಸಿದೆ, ಆ ವೇಳೆ ಮನೆಯಲ್ಲಿ ಸುರೇಶ್ ಅವರ ಪತ್ನಿ ಸುಜಾತಾ ಮತ್ತು ತಾಯಿ ಶೈಲಜಾ ಇದ್ದರು. ಚಿರತೆ ಏಕಾಏಕಿ ಮನೆಗೆ ನುಗ್ಗಿ ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ಪ್ರವೇಶಿಸಿತು. ಸಮಯಪ್ರಜ್ಞೆಯಿಂದ ಸುಜಾತಾ ಅವರು ತಮ್ಮ ಅತ್ತೆ ಶೈಲಜಾ ಅವರನ್ನು ಧೈರ್ಯದಿಂದ ರಕ್ಷಿಸಿದರು.

ಮನೆಯಲ್ಲಿ ಚಿರತೆ ಅಡಗಿರುವುದು ಗೊತ್ತಾದ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಂಧಿಸಲಾಗಿದೆ.

ಸುಜಾತಾ ಅವರ ಸಮಯಪ್ರಜ್ಞೆಯಿಂದ ಅಜ್ಜಿ ಶೈಲಜಾ ಅವರ ಜೀವ ಉಳಿಸಿದ್ದು, ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

1 hour ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

1 hour ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago