ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ, ಮಂಚದ ಕೆಳಗೆ ಅವಿತು ಕುಳಿತಿರುವುದು ಕಂಡುಬಂದಿದೆ.
ಘಟನೆ ಸಮಯದಲ್ಲಿ ಸುರೇಶ್ ಅವರ ಪತ್ನಿ ಸುಜಾತಾ ಮತ್ತು ತಾಯಿ ಶೈಲಜಾ ಮನೆಯಲ್ಲಿದ್ದರು. ಏಕಾಏಕಿ ಚಿರತೆ ಮನೆಗೆ ಪ್ರವೇಶಿಸಿ, ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ನುಗ್ಗಿತು. ಸಮಯಪ್ರಜ್ಞೆಯಿಂದ ಸುಜಾತಾ ಅವರು ತಮ್ಮ ಅತ್ತೆ ಶೈಲಜಾರನ್ನು ತಕ್ಷಣ ರಕ್ಷಿಸಿದರು. ಚಿರತೆಯ ಏಕಾಏಕಿ ಪ್ರವೇಶದಿಂದ ಮನೆಯವರು ತೀವ್ರ ಆತಂಕಕ್ಕೀಡಾದರು.
ಮನೆಯಲ್ಲಿ ಚಿರತೆ ಅಡಗಿರುವುದು ಗೊತ್ತಾದ ನಂತರ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…