ಮೈಸೂರು ನಗರ

ಮೈಸೂರು| ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳು ಪತ್ರ ಚಳುವಳಿ ಆರಂಭಿಸಿದ್ದಾರೆ.

ಸಿಎಂ ಕುರ್ಚಿಗಾಗಿ ಪತ್ರ ಬರೆದಿದ್ದು ಆದ ಬಳಿಕ ಈಗ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್‌ ಪಕ್ಷದ ಎಸ್‌ಸಿ ವಿಭಾಗದ ವತಿಯಿಂದ ಪೋಸ್ಟ್‌ ಕಾರ್ಡ್‌ ಚಳುವಳಿ ಆರಂಭವಾಗಿದೆ.

ಮೈಸೂರಿನ ಗಾಂಧಿ ಚೌಕದಲ್ಲಿ ಹಮ್ಮಿಕೊಂಡಿದ್ದ ಪೋಸ್ಟ್ ಕಾರ್ಡ್ ಅಭಿಯಾನದಲ್ಲಿ ಮಾಜಿ ಮಹಾಪೌರರು, ಸದಸ್ಯರುಗಳು ಸೇರಿದಂತೆ ಅನೇಕರು ಭಾಗಿಯಾಗಿ ಬೇಕೇ ಬೇಕು ಮಂತ್ರಿ ಬೇಕು ಎಂದು ಘೋಷಣೆ ಕೂಗಿದರು.

ಪೋಸ್ಟ್ ಕಾರ್ಡ್‌ನಲ್ಲಿ ಶಾಸಕ ತನ್ವೀರ್‌ ಸೇಠ್ ಭಾವಚಿತ್ರ ಮುದ್ರಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿರುವ ಪತ್ರಕ್ಕೆ ಸಹಿ ಹಾಕುವ ಮೂಲಕ ತನ್ವಿರ್‌ಸೇಠ್ ಫ್ಲೇಕಾರ್ಡ್‌ ಹಿಡಿದುಕೊಂಡು ಜೈಕಾರ ಹಾಕಿದರು.

ಕಾಂಗ್ರೆಸ್ ಹೈಕಮಾಂಡ್ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಪೋಸ್ಟ್‌ ಕಾರ್ಡ್‌ ಕಳುಹಿಸಿರುವ ಕಾರ್ಯಕರ್ತರು, ಈ ಬಾರಿ ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

8 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

14 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

27 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

42 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago