ಮೈಸೂರು ನಗರ

ಮೈಸೂರು| ರಾಯನಕೆರೆ ನೀರು ಸಂಸ್ಕರಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ

ಮೈಸೂರು: ರಾಯನಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಚ್.ಡಿ.ಕೋಟೆ ರಸ್ತೆಯಲ್ಲಿರುವ ರಾಯನಕೆರೆ ನೀರು ಸಂಸ್ಕರಣಾ ಘಟಕದ ಉತ್ತಮ ನಿರ್ವಹಣೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಮಲಿನ ನೀರು ಎತ್ತುವ ಯಂತ್ರಗಾರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜನರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ನೀರು ಸಂಸ್ಕರಣಾ ಘಟಕದಲ್ಲಿ ಬೆಳೆದಿರುವ ಗಿಡ ಗಂಟೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು. ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುವವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಹಾಗೂ ಅವರಿಗೆ ಉತ್ತಮವಾದ ಗ್ಲೌಸ್‌, ಬೂಟ್‌ ಹಾಗೂ ಮಾಸ್ಕ್‌ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್‌ ಆಸಿಫ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಉಮಾ ಶಂಕರ್‌, ಮೈಸೂರು ತಾಲ್ಲೂಕು ತಹಶಿಲ್ದಾರ್‌ ಮಹೇಶ್‌ ಕುಮಾರ್‌, ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

4 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

4 hours ago