Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ಹಾಕಲು ಕೇಂದ್ರ ಕಚೇರಿಗೆ ಪತ್ರ ಬರೆದ ಲೋಕಾಯುಕ್ತ ಎಸ್‌ಪಿ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಅಭಿಪ್ರಾಯ ಕೋರಿ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ಅವರು ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ.

ಈ ಪತ್ರಕ್ಕೆ ಕೇಂದ್ರ ಕಚೇರಿಯಿಂದ ಉತ್ತರ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ವಿರುದ್ಧ ಕಿಡಿಕಾರಿದ್ದಾರೆ. ಕೋರ್ಟ್‌ ತೀರ್ಪು ನೀಡಿದ ತಕ್ಷಣವೇ ಎಫ್‌ಐಆರ್‌ ದಾಖಲಿಸಬೇಕಿತ್ತು. ಆದರೆ ಉದೇಶ್‌ ಅವರು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇವತ್ತು ಕಳೆದರೆ ನಾಳೆ ಹಾಗೂ ನಾಡಿದ್ದು ರಜೆ ಇರುತ್ತದೆ. ಹಾಗಾಗಿ ಇಂದೇ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

Tags: