ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಬಾಮೈದ ಲೋಕಾ ಕಚೇರಿಗೆ ಭೇಟಿ: ಶಾಸಕ ಶ್ರೀವತ್ಸ ಆಕ್ರೋಶ ಪ್ರತಿಕ್ರಿಯೆ

ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಯಾವುದೇ ಅಧಿಕಾರಿಗಳು ರಾತ್ರಿ ಸಮಯದಲ್ಲಿ ದಾಖಲೆಗಳನ್ನು ತಂದು ಕೊಡಿ ಎಂದು ಕೇಳುವುದಿಲ್ಲ. ಅವರು ರಾತ್ರಿ ವೇಳೆಯಲ್ಲಿಯೇ ಯಾಕೆ ದಿಢೀರ್‌ನೇ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದರು.

ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ಪ್ರಾಮಾಣಿಕವಾದ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ ಎ1 ಆರೋಪಿ ಸಿದ್ದರಾಮಯ್ಯ ಅವರೇ ರಾಜ್ಯ ಸರ್ಕಾರ ನಡೆಸುತ್ತಿದ್ದಾರೆ. ಈ ಮಧ್ಯೆ ಎ3 ಆರೋಪಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಹಿರಿಯ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ಕಿಡಿಕಾರಿದರು.

ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಜಿಲ್ಲಾಮಟ್ಟದ ಅಧಿಕಾರಿ ಎಂದಾದರೂ ತನಿಖೆ ನಡೆಸಲು ಸಾಧ್ಯನಾ ಎಂದು ಪ್ರಶ್ನಿಸಿದ ಅವರು, ಈ ಕಾರಣಕ್ಕಾಗಿಯೇ ನವೆಂಬರ್‌.26ರಂದು ಮೊದಲು ಹೈಕೋರ್ಟ್‌ ಗಮನಕ್ಕೂ ತರಲಾಗುವುದು. ಬಳಿಕ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶಿಸಬೇಕು. ಆಗ ಮಾತ್ರ ಸಿಬಿಐನವರು ಯಾರ ಮುಲಾಜಿಲ್ಲದೆ ತನಿಖೆ ನಡೆಸುತ್ತಾರೆ. ಅಲ್ಲದೇ ಈ ಮುಡಾ ಪ್ರಕರಣದ ಬಗ್ಗೆ ಅಧಿವೇಶನದ ಮೊದಲ ದಿನವೇ ಸದನದಲ್ಲಿ ಚರ್ಚೆ ನಡೆದರೂ ಅಚ್ಚರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago