Flame border background, black realistic fire image
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಗರದಲ್ಲಿ ನಡೆದಿದೆ.
ನಗರದ ಗೋಕುಲಂ ನಿವಾಸಿ ಮರಿಶೆಟ್ಟಿ(75) ಎಂಬವರೇ ಬೆಂಕಿಗೆ ಸಿಲುಕಿ ಮೃತಪಟ್ಟವರು. ಅವರು ಸುಮಾರು 45 ವರ್ಷಗಳಿಂದ ನಗರದ ಗೋಕುಲಂನಲ್ಲಿ ಇರುವ ಗೋಕುಲ್ ಚಿತ್ರಮಂದಿರದಲ್ಲಿ ವಾಚ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಳಿಗ್ಗೆ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಅಲ್ಲಿದ್ದ ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೇ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ.
ಕೆಲಸ ಮುಗಿಸಿ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿಯನ್ನು ಆರಿಸಿದ್ದಾರೆ. ಈ ಸಂಬಂದ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 15 ವರ್ಷಗಳ ಹಿಂದೆ ಗೋಕುಲ್ ಚಿತ್ರಮಂದಿರ ಮುಚ್ಚಲ್ಪಟ್ಟಿತ್ತು. ಇದೀಗ ಅಲ್ಲಿನ ಒಂದುವರೆ ಎಕರೆ ಜಾಗ ಖಾಲಿ ಬಿದ್ದಿದೆ. ಅಲ್ಲಿ ಮರಿಶೆಟ್ಟಿ ಅವರು ನೀರು ಕಾಯಿಸಲೆಂದು ಸೌದೆಯನ್ನು ಶೇಖರಿಸಿ ಇಟ್ಟಿದ್ದರು.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿತ್ರಮಂದಿರದ ಆವರಣಕ್ಕೆ ತೆರಳಿದ್ದ ವೇಳೆ ಬೆಂಕಿ ತರಗೆಲೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಆರಿಸಲು ಹೋಗಿ ಆಯತಪ್ಪಿ ಬಿದ್ದ ಅವರಿಗೆ ಬಹುಶಃ ಏದ್ದು ನಿಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೂ ಬೆಂಕಿ ತಗುಲಿರಬಹುದು ಎಂದು ಪೊಲಿಸರು ಅಂದಾಜಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…