ಮೈಸೂರು ನಗರ

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೋಕುಲಂ ನಿವಾಸಿ ಮರಿಶೆಟ್ಟಿ(75) ಎಂಬವರೇ ಬೆಂಕಿಗೆ ಸಿಲುಕಿ ಮೃತಪಟ್ಟವರು. ಅವರು ಸುಮಾರು 45 ವರ್ಷಗಳಿಂದ ನಗರದ ಗೋಕುಲಂನಲ್ಲಿ ಇರುವ ಗೋಕುಲ್ ಚಿತ್ರಮಂದಿರದಲ್ಲಿ ವಾಚ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮಂಗಳವಾರ ಬೆಳಿಗ್ಗೆ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಅಲ್ಲಿದ್ದ ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೇ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ.

ಕೆಲಸ ಮುಗಿಸಿ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿಯನ್ನು ಆರಿಸಿದ್ದಾರೆ. ಈ ಸಂಬಂದ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 15 ವರ್ಷಗಳ ಹಿಂದೆ ಗೋಕುಲ್ ಚಿತ್ರಮಂದಿರ ಮುಚ್ಚಲ್ಪಟ್ಟಿತ್ತು. ಇದೀಗ ಅಲ್ಲಿನ ಒಂದುವರೆ ಎಕರೆ ಜಾಗ ಖಾಲಿ ಬಿದ್ದಿದೆ. ಅಲ್ಲಿ ಮರಿಶೆಟ್ಟಿ ಅವರು ನೀರು ಕಾಯಿಸಲೆಂದು ಸೌದೆಯನ್ನು ಶೇಖರಿಸಿ ಇಟ್ಟಿದ್ದರು.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿತ್ರಮಂದಿರದ ಆವರಣಕ್ಕೆ ತೆರಳಿದ್ದ ವೇಳೆ ಬೆಂಕಿ ತರಗೆಲೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಆರಿಸಲು ಹೋಗಿ ಆಯತಪ್ಪಿ ಬಿದ್ದ ಅವರಿಗೆ ಬಹುಶಃ ಏದ್ದು ನಿಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೂ ಬೆಂಕಿ ತಗುಲಿರಬಹುದು ಎಂದು ಪೊಲಿಸರು ಅಂದಾಜಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

3 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

3 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

3 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

3 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

3 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

3 hours ago