Mysore
25
broken clouds

Social Media

ಭಾನುವಾರ, 25 ಜನವರಿ 2026
Light
Dark

ಮೈಸೂರು: ವಾಕಿಂಗ್ ಮಾಡುವಾಗಲೇ ವ್ಯಕ್ತಿ ಸಾವು

ಮೈಸೂರು: ವಾಕಿಂಗ್ ಮಾಡುತ್ತಿದ್ದ ವೇಳೆಯೇ ಕುಸಿದುಬಿದ್ದು‌ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ನಡೆದಿದೆ.

ಸುಮಾರು 60 ವರ್ಷದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಫುಟ್ ಪಾತ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಸ್ಥಳಕ್ಕೆ ಹೆಬ್ಬಾಳ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ‌‌.

ಇನ್ನು ವ್ಯಕ್ತಿಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Tags:
error: Content is protected !!