ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.
ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಇದನ್ನು ಓದಿ: ಮೈಸೂರು : ಸೆಸ್ಕ್‌ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಲಾಗುವುದು.
ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್ ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…