ಮೈಸೂರು ನಗರ

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶೀಲಿಸಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಸಂಸದರು, “ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಾರಾಂತ್ಯಗಳಲ್ಲಿ ಹೆಚ್ಚಿನ ವಾಹನ ಸಂಚಾರ ಇರುವುದರಿಂದ ಹೆಚ್ಚುವರಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಜೊತೆಗೆ ಕಾಮಗಾರಿಗಳು ಅತ್ಯುತ್ತಮ ಗುಣಮಟ್ಟದಲ್ಲಿ ನಡೆಯಬೇಕು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ,” ಎಂದು ಹೇಳಿದರು.

ಈ ಯೋಜನೆಯಿಂದ ಈ ಜಂಕ್ಷನ್‌ನಲ್ಲಿರುವ ಟ್ರಾಫಿಕ್ ಬಾಟಲ್‌ನೇಕ್ ಸಮಸ್ಯೆ ನಿವಾರಣೆಯಾಗಲಿದೆ. ಜೊತೆಗೆ ಮೈಸೂರು-ಬೆಂಗಳೂರು ರಸ್ತೆಯ ಪ್ರವೇಶ ಹಾಗೂ ನಿರ್ಗಮನ ವ್ಯವಸ್ಥೆಯನ್ನೂ ಈ ಯೋಜನೆಯಡಿ ಸುಧಾರಿಸಲಾಗುತ್ತದೆ. ಇದರಿಂದ ಈ ರಸ್ತೆಯನ್ನು ಬಳಸುವ ಎಲ್ಲಾ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ, ಎಂದು ಸಂಸದ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆಯ ಇಂಜಿನಿಯರ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

1 hour ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

1 hour ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

1 hour ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

1 hour ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

1 hour ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

2 hours ago