ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್‍ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ ತೀವ್ರ ವಿರೋಧವಿದೆ ಎಂದಿದ್ದಾರೆ.
ಇದನ್ನು ಓದಿ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಪ್ರಕರಣ: ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
ವಿನೋಬಾ ರಸ್ತೆಯಲ್ಲಿ ಫ್ಲೈಓವರ್ ನಿರ್ಮಿಸಲು ಮುಂದಾದರೆ ಮರಗಳ ಹರಣವಾಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕೆಂದು ಹೇಳಿದ್ದಾರೆ.
ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್‍ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗನುಗುಣವಾಗಿ ಕಾಮಗಾರಿ ಕೈಗೊಳ್ಳಲಿ, ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ, ಜನರ ವಿರೋಧದ ನಡುವೆ ಫ್ಲೈಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…