ಮೈಸೂರು: ಇಂದು 2024-25ನೇ ಸಾಲಿನ ಮುಡಾ ಬಜೆಟ್‌ನ್ನು ಆಯುಕ್ತ ರಘುನಂದನ್ ಅವರು ಮಂಡನೆ ಮಾಡಿದರು.
ಮುಡಾ ಕಚೇರಿಯ ಸಭಾಂಗಣದಲ್ಲಿ ಮುಡಾ ಆಡಳಿತಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಆಯುಕ್ತ ರಘುನಂದನ್ ಅವರು ಬಜೆಟ್ ಮಂಡಿಸಿದರು.
ಕಳೆದ ವರ್ಷ ಘೋಷಣೆ ಮಾಡಿದ್ದ ಯೋಜನೆಗಳಿಗೆ ಮಾರ್ಪಾಡು ಮಾಡಿ ಬಡಾವಣೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಮತ್ತಿತರ ಯೋಜನೆಗಳಿಗೆ ಆದ್ಯತೆ ನೀಡಲು ಬಜೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ.
ಬಜೆಟ್ ಮಂಡನೆ ವೇಳೆ ಶಾಸಕರಾದ ತನ್ವಿರ್ ಸೇಠ್, ಜಿ.ಟಿ.ದೇವೇಗೌಡ, ದರ್ಶನ್ ಧ್ರುವನಾರಾಯಣ್, ಟಿ.ಎಸ್.ಶ್ರೀವತ್ಸ, ತಿಮ್ಮಯ್ಯ, ಮಂಜೇಗೌಡ, ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್ ಸೇರಿದಂತೆ ಮುಡಾ ಅಧಿಕಾರಿಗಳು ಭಾಗಿಯಾಗಿದ್ದರು.