ಮೈಸೂರು: ಮೈಸೂರು ಮುಡಾ ಹಗರಣ ಬಗೆದಷ್ಟು ಬಯಲಾಗುತ್ತಿದ್ದು, 5೦:50 ಅನುಪಾತದ ದಾಖಲೆಗಳೇ ಮಾಯವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಸಭೆ ನಡೆದ ವೇಳೆ ಅಧಿಕಾರಿಗಳೇ ಈ ಬಗ್ಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಮುಡಾ ಪ್ರಾಧಿಕಾರದ ಸದಸ್ಯರಿಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.
50:50 ಅನುಪಾತದ ಕೆಲವು ಸೆಲೆಕ್ಟಿವ್ ಸೈಟ್‌ಗಳ ಕಡತಗಳೇ ಮಾಯವಾಗಿದ್ದು, ಹಿಂದಿನ ಆಯುಕ್ತರು ಅವುಗಳನ್ನು ತೆಗೆದುಕೊಂಡು ಹೋಗಿರಬೇಕು ಅಥವಾ ಸುಟ್ಟು ಹಾಕಿರಬೇಕು ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಮುಡಾ ದಾಖಲೆ ಕೇಳಿದರೆ ಕೆಲವು ಅಧಿಕಾರಿಗಳು ಅವುಗಳು ಕಳೆದು ಹೋಗಿವೆ ಎಂದು ಹೇಳುತ್ತಿದ್ದು, ಅಧಿಕಾರಿಗಳು ಹೇಳಿದ ಉತ್ತರಕ್ಕೆ ಜನಪ್ರತಿನಿಧಿಗಳು ಬೆಚ್ಚಿ ಬಿದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಡಾ ಹಗರಣ ದಿನದಿಂದ ದಿನಕ್ಕೆ ಮತ್ತಷ್ಟು ತಿರುವು ಪಡೆದುಕೊಳ್ಳುತ್ತಿದ್ದು, ಮುಂದೆ ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…
ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…
ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…