ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಿದ್ದೇನೆ ಎಂದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿಗೆ 50:50 ಅನುಪಾತದಲ್ಲಿ ನೀಡಿರುವ 14 ನಿವೇಶನಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣವನ್ನ ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಳೆದ ತಿಂಗಳ ಫೆಬ್ರವರಿ.7ರಂದು ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮೂಲಕ ಸ್ನೇಹಮಯಿ ಕೃಷ್ಣ ಅವರು, ಮತ್ತೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.





