ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರಾಭಿವೃದ್ಧಿ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನು ಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರಘು ಕೌಟಿಲ್ಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಾಗೇಂದ್ರ ಒತ್ತಾಯ ಮಾಡಿದ್ದಾರೆ.
ಇದರ ಜೊತೆಗೆ ಈ ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಾಗೇಂದ್ರ ಮನವಿ ಮಾಡಿದ್ದಾರೆ.
ಈ ಮೂಲಕ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರಿಗೆ ಮುಡಾ ಹಗರಣದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಆರೋಪ ನಿಜವಾದರೆ ಅವರೂ ಕೂಡ ಮುಡಾ ಹಗರಣದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.