Mysore
24
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಮೈಸೂರು ಮುಡಾ ಹಗರಣ: ಜಯರಾಮ್‌ ಕಚೇರಿ ಹಾಗೂ ನಿವಾಸದ ಮೇಲೆ ಇ.ಡಿ ದಾಳಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರವಾಗಿ ಇ.ಡಿ ಕಾರ್ಯಾಚರಣೆ ಮುಂದುವರಿದಿದೆ.

ಈ ಹಿಂದಿನ ಮುಡಾದ ಆಯುಕ್ತರಾಗಿದ್ದ ದಿನೇಶ್‌ ಕುಮಾರ್‌ ಆಪ್ತ ಜಯರಾಮ್‌ ಕಚೇರಿ ಹಾಗೂ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಕುವೆಂಪುನಗರದಲ್ಲಿರುವ ಜಯರಾಮ್‌ ಕಚೇರಿ ಹಾಗೂ ನಿವಾಸದಲ್ಲಿ ಅಧಿಕಾರಿಗಳು ಸಂಪೂರ್ಣ ದಾಖಲೆ ಪರಿಶೀಲನೆ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮುಡಾದಲ್ಲಿ 50:50 ಅನುಪಾತದಡಿ ನಿವೇಶನಗಳನ್ನು ಮಂಜೂರು ಮಾಡಿಸುವ ಕೆಲಸವನ್ನು ಮೀಡಿಯೇಟರ್‌ ಜಯರಾಮ್‌ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Tags:
error: Content is protected !!