ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. ವಿಚಾರಣೆಯ ವೇಳೆ ಹಗರಣದ ದಾಖಲೆ ಕೇಳಿದ್ರೆ, ನನ್ನ ಬಳಿ ಇರುವ ಸಾಕಷ್ಟು ದಾಖಲೆಗಳನ್ನು ಅವರಿಗೆ ಸಲ್ಲಿಸುತ್ತೇನೆ. ನನಗೆ ಲೋಕಾಯುಕ್ತ ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಮುಡಾ ಪ್ರಕರಣದಲ್ಲಿ ಇ.ಡಿ. ತನಿಖೆಯೂ ತಾರ್ಕಿಕ ಅಂತ್ಯ ಕಾಣಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.