ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ.
ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ರಾಕೇಶ್ ಪಾಪಣ್ಣ ಅವರು 20ಕ್ಕೂ ಅಧಿಕ ಮುಡಾ ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಬೆನ್ನಲ್ಲೇ ಮೈಸೂರು ನಗರದ ಹಿನಕಲ್ ಗ್ರಾಮದಲ್ಲಿರುವ ರಾಕೇಶ್ ಪಾಪಣ್ಣ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ರಾಕೇಶ್ ಅವರನ್ನು ವಿಚಾರಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದಿನಕಳೆದಂತೆ ಮುಡಾ ಹಗರಣ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮುಂದೆ ಇದು ರಾಜ್ಯ ಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.