ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಮೈಸೂರಿನ ಮುಡಾ ಕಚೇರಿ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸುವ ಮೂಲಕ ಇಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
14 ನಿವೇಶನಗಳನ್ನು ಸಿಎಂ ಪತ್ನಿ ಪಾರ್ವತಿ ಅವರು ಹಿಂದಿರುಗಿಸಿದ್ದರೂ ಸಿದ್ದರಾಮಯ್ಯ ಕುಟುಂಬಸ್ಥರು ವಿಚಾರಣೆ ಎದುರಿಸುವುದು ಅನಿವಾರ್ಯ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮುಡಾ ಸಭೆಯಲ್ಲಿ ಭಾಗಿಯಾಗಿದ್ದಾಗಿ ಹೇಳಿರುವುದೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ದೊಡ್ಡ ಕಂಟಕವಾಗಿದೆ ಎನ್ನಲಾಗಿದ್ದು, ಮುಡಾ ಹಗರಣದ ತಲೆನೋವು ಸಿಎಂಗೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…
ಹೆಚ್. ಡಿ. ಕೋಟೆ ತಾಲ್ಲೂಕಿನ ಎಂ. ಎಂ. ಮುಖ್ಯ ರಸ್ತೆಯಲ್ಲಿರುವ ಹಂಪಾಪುರ ಗ್ರಾಮಕ್ಕೆ ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಸಾಕಷ್ಟು ಜನ…
ಮೈಸೂರಿನ ವಿವೇಕಾನಂದ ನಗರದಲ್ಲಿ ನಿರ್ಮಾಣ ಆಗಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ, ಮಂಟಪ, ವೃತ್ತ ಮೂಲವಿನ್ಯಾಸದಂತೆ ಇರದಿರುವುದು ಬೇಸರದ ಸಂಗತಿ. ಚಿತ್ರ…
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕೆಲವೇ ತಿಂಗಳ ಹಿಂದೆ ಹೊರಡಿಸಿದ ಕರಡು ನಿಯಮಗಳಲ್ಲಿ ಗ್ರೂಪ್ ಸಿ ವೃಂದದ ರಾಜ್ಯ…
ಟಿ.ಎಸ್.ವೇಣುಗೋಪಾಲ್ ಇತಿಹಾಸದಲ್ಲಿ ಒಂದು ಎಚ್ಚರಿಕೆಯ ಪಾಠವಾಗಿದೆ ನವೆಂಬರ್ ೮, ೨೦೧೬ ರಂದು ರಾತ್ರಿ ೮ ಗಂಟೆಗೆ ಪ್ರಧಾನಿ ನರೇಂದ್ರ ಮೋದಿ…
ಎಸ್.ಎಲ್.ಚೆನ್ನಬಸವಣ್ಣ , ಐಪಿಎಸ್, ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ‘ಎಮ್ಮೆ ಇನ್ವೆಸ್ಟಿಗೇಷನ್ ಟೀಮ್’ ಅಂತ ಅಡ್ಡ ಹೆಸರೂ ಬಂತು…