Mysore
30
clear sky

Social Media

ಮಂಗಳವಾರ, 11 ಮಾರ್ಚ್ 2025
Light
Dark

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗಂಗರಾಜು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.

ಈ ಹಿನ್ನೆಲೆಯಲ್ಲಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಇದರಲ್ಲಿ ಅಧಿಕಾರಿಗಳು ಮಾಹಿತಿಯನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದು ಆರೋಪ ಮಾಡಿದ್ದಾರೆ.

ಮುಡಾ ಅಧಿಕಾರಿಗಳು ಮತ್ತು ಕೆಲವು ಸರ್ಕಾರಿ ಸಂಸ್ಥೆಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಶಾಮೀಲಾಗಿದ್ದಾರೆ.

ಮುಡಾ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಲೋಕಾಯುಕ್ತ ಅಧಿಕಾರಿಗಳು ಕಾನೂನಿನ ಪ್ರಕಾರ ಕಾರ್ಯ ನಿರ್ವಹಿಸುತ್ತಿಲ್ಲ.

ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: