ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ ಜಾಸ್ತಿಯಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಅವರೇ ಹಗರಣದ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಡಾ ಕೇಸ್ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಇನ್ನು ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಬೇಕಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…