ಮೈಸೂರು ನಗರ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್‌

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ  ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರೆಲ್ಲಾ ತನಿಖೆ ಎದುರಿಸಲಿದ್ದು, ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago