ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಯಾರೇ ಆದರೂ ಜಿ-ಕ್ಯಾಟಗರಿ ಸೈಟ್ ಪಡೆಯಬೇಕಾದರೆ ಸಾಂವಿಧಾನಿಕ ಹುದ್ದೆಯಲ್ಲಿರಬೇಕು. ಆದರೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತ ಹೇಗೆ ಸೈಟ್ ಪಡೆಯಲು ಸಾಧ್ಯ. ಈ ಬಗ್ಗೆ ಶ್ರೀವತ್ಸ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಸುಳ್ಳನ್ನೇ ಹತ್ತು ಬಾರಿ ಹೇಳಿ ಜನರಿಗೆ ನಂಬಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿದ್ದಾರೆ. ಇದು ದೊಡ್ಡ ದುರಂತದ ಸಂಗತಿ. ವೈಟ್ನರ್ ಹಾಕಿರುವುದನ್ನು ನೀವೇ ಊಹೇ ಮಾಡಿಕೊಂಡು ಸುಳ್ಳು ಹೇಳುವುದು ಖಂಡನೀಯ. ಸಿದ್ದರಾಮಯ್ಯ ಅವರಿಗೆ ಕೆಲಸ ಮಾಡಲು ಬಿಡುತ್ತಾ ಇಲ್ಲ. ಪ್ರಕರಣ ತನಿಖೆಯಲ್ಲಿದೆ. ತನಿಖೆ ಮುಗಿದ ಬಳಿಕ ವರದಿ ಏನು ಬರುತ್ತೆ ಕಾದು ನೋಡೋಣ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ 63 ಕೇಸ್‌ಗಳಿವೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, 2007ರಿಂದ 2023ರವರೆಗೆ ಸಿದ್ದರಾಮಯ್ಯ ಅವರ ಮೇಲಿರುವ ಕೇಸ್‌ಗಳು ಕೇವಲ 20. ಅವುಗಳೆಲ್ಲಾ ಬಹುತೇಕ ಸಣ್ಣ-ಪುಟ್ಟ ಕೇಸ್‌ಗಳು ಅಷ್ಟೇ. ಯಾವ ಆಧಾರದ ಮೇಲೆ ಕುಮಾರಸ್ವಾಮಿ ಅವರು 63 ಕೇಸ್ ಇವೆ ಅಂತ ಹೇಳಿದ್ರು ಗೊತ್ತಿಲ್ಲ ಎಂದು ಟೀಕೆ ಮಾಡಿದರು.
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…