ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಧರಿಸುವ ಶ್ವೇತವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ ಹಗರಣಗಳು ಬೆಳಕಿಗೆ ಬಂದಾಗಿನಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಹೆಂಡತಿ ಹೆಸರಿನಲ್ಲಿ ಸೈಟು ಪಡೆದಿರುವುದು ನಾಚಿಕೆಗೇಡು. ನಗರಾಭಿವೃದ್ಧಿ ಸಚಿವನನ್ನು ಕೂರಿಸಿಕೊಂಡು ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದರು. ಆ ಸಚಿವ ಕಂತ್ರಿ ರೀತಿ ವರ್ತಿಸುತ್ತಿದ್ದಾನೆ. ಸಿದ್ದರಾಮಯ್ಯ ಶ್ವೇತವಸ್ತ್ರ ಧರಿಸುತ್ತಿದ್ದಾರೆ. ಆ ಶ್ವೇತ ವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಈಗ ಎಚ್ಚೆತ್ತುಕೊಳ್ಳದಿದ್ದರೆ ಅವರ ಜೊತೆಯಲ್ಲಿರುವವರೇ ಕಪ್ಪು ಮಸಿ ಬಳಿದು ಹೋಗುತ್ತಾರೆ. ನಿಮ್ಮ ತಪ್ಪಿನಿಂದ ಏನೂ ಅರಿಯದ ನಿಮ್ಮ ಪತ್ನಿ ಪಾರ್ವತಿಯವರ ಹೆಸರಿಗೆ ಕಳಂಕ ಬರುವಂತಾಗಿದೆ. ರಾಜ್ಯದಲ್ಲಿ ಹಿಂದೆಂದೂ ಇಷ್ಟೊಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಮುಡಾ ಆಯುಕ್ತರ ವರ್ಗಾವಣೆ ಬಳಿಕವೂ ಅಕ್ರಮ ಮುಂದುವರಿದಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

2 mins ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

7 mins ago

ಶಾಲೆ ತೊರೆದ ಬಾಲಕಿಯರಿಗೆ ವೇಶ್ಯಾವಾಟಿಕೆ ಬಲೆ

ಎಚ್.ಎಸ್.ದಿನೇಶ್‌ಕುಮಾರ್ ಕಣ್ಮುಚ್ಚಿ ಕುಳಿತಿರುವ ಇಲಾಖೆಗಳು; ಕೆಲ ದಿನಗಳ ಹಿಂದೆ ೧೫ರ ಬಾಲೆ ರಕ್ಷಿಸಿದ ಒಡನಾಡಿ ಮೈಸೂರು: ಬಡತನ, ಕೀಳರಿಮೆ ಇನ್ನಿತರ…

12 mins ago

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

9 hours ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

9 hours ago