ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್ ಟೆನ್ಷನ್ ಶುರುವಾಗಿದೆ.
ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಸಿಎಂಗೂ ಲೋಕಾಯುಕ್ತ ನೋಟಿಸ್ ನೀಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎ2, ಎ3 ಹಾಗೂ ಎ4 ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.
ಈಗ ಬಾಕಿ ಇರುವುದು ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಮಾತ್ರ. ಹೀಗಾಗಿ ಸದ್ಯದಲ್ಲೇ ಸಿಎಂಗೆ ಲೋಕಾಯುಕ್ತ ನೋಟಿಸ್ ನೀಡುವ ಸಾಧ್ಯತೆಯಿದ್ದು, ಸಿದ್ದರಾಮಯ್ಯ ವಿಚಾರಣೆ ಎದುರಿಸಲು ಸಿದ್ಧರಾಗಬೇಕಿದೆ ಎನ್ನಲಾಗಿದೆ.