ಮೈಸೂರು ನಗರ

ಮುಡಾ ಪ್ರಕರಣ: ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯರಿಗೂ ಲೋಕಾಯುಕ್ತ ನೋಟಿಸ್‌ ನೀಡುವ ಸಾಧ್ಯತೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್‌ ಟೆನ್ಷನ್‌ ಶುರುವಾಗಿದೆ.

ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಸಿಎಂಗೂ ಲೋಕಾಯುಕ್ತ ನೋಟಿಸ್‌ ನೀಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎ2, ಎ3 ಹಾಗೂ ಎ4 ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.

ಈಗ ಬಾಕಿ ಇರುವುದು ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಮಾತ್ರ. ಹೀಗಾಗಿ ಸದ್ಯದಲ್ಲೇ ಸಿಎಂಗೆ ಲೋಕಾಯುಕ್ತ ನೋಟಿಸ್‌ ನೀಡುವ ಸಾಧ್ಯತೆಯಿದ್ದು, ಸಿದ್ದರಾಮಯ್ಯ ವಿಚಾರಣೆ ಎದುರಿಸಲು ಸಿದ್ಧರಾಗಬೇಕಿದೆ ಎನ್ನಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…

26 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…

34 mins ago

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

51 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

1 hour ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago