ಮೈಸೂರು: ಯಾರು ಸುಳ್ಳ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಮೈಸೂರು ಮುಡಾ ಹಗರಣ ಕೋಲಾಹಲ ಎಬ್ಬಿಸಿದ್ದು, ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ.
ಈ ನಡುವೆ 50:50 ಸೈಟ್ ಹಂಚಿಕೆ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ದೇವನೂರು ಮೂರನೇ ಹಂತದಲ್ಲಿ ನಿವೇಶನ ಇಲ್ಲದ ಕಾರಣ ನನ್ನ ಶ್ರೀಮತಿ ಸಮಾಂತರ ಬಡಾವಣೆಯಲ್ಲಿ ಸೈಟ್ ಕೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದರು.
ಸಿಎಂ ಸಿದ್ದರಾಮಯ್ಯ ಮಾಡಿದ್ದ ಪೋಸ್ಟ್‌ಗೆ ಕೌಂಟರ್ ಕೊಟ್ಟ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮುಡಾ ಪ್ರಾಧಿಕಾರ ಮಾಹಿತಿ ಹಂಚಿಕೊಂಡಿದ್ದು, ದೇವನೂರು ಬಡಾವಣೆಯಲ್ಲಿ 370 ನಿವೇಶನಗಳು ಇನ್ನು ಬಾಕಿಯಿದೆ ಎಂದು ಹೇಳಿದೆ. ಆಗಿದ್ರೆ ಯಾರು ಸುಳ್ಳು ಹೇಳುತ್ತಿದ್ದಾರೆ ಎಂದು ರಾಜ್ಯದ ಜನರ ಗಮನಿಸಬೇಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.