ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆರ್.ಮಂಜುನಾಥ್ ಸೇರಿದಂತೆ ಎಂಟು ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವೀಣಾ ಆರ್, ಗೀತಾ ಈ ಕೌಲಗಿ, ಮಹೇಶ್ ಜಿ, ಮಂಜುನಾಥ್ ಆರ್, ಜಗನ್ನಾಥ ರೆಡ್ಡಿ, ಅರುಣ ಕುಮಾರ್ ಕುಲಕರ್ಣಿ, ಅನುರಾಧ ವಸ್ತ್ರ, ಮೊಹಮ್ಮದ್ ಶಕೀಲ್ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.
ಈ ಮೂಲಕ ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಹಲವು ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…