ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಸೈಟ್ ಬಗ್ಗೆ ಒಂದು ಸಣ್ಣ ದಾಖಲೆ ಬಿಡುಗಡೆ ಮಾಡಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ನನ್ನ ಮೇಲಿನ ಆರೋಪ ಸುಳ್ಳಾದರೆ ಲಕ್ಷ್ಮಣ್ ರಾಜಕೀಯ ನಿವೃತ್ತಿ ಹೊಂದುತ್ತಾರಾ ಎಂದು ಸವಾಲು ಹಾಕಿದರು.
ಲಕ್ಷ್ಮಣ್ ಅವರು ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಎಲುಬಿಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಬಾರದು. ನನ್ನ ಹಾಗೂ ನನ್ನ ಕುಟುಂಬದ ಹೆಸರಿನಲ್ಲಿ ಮುಡಾಗೆ ಸಂಬಂಧಿಸಿದ ಒಂದು ತುಂಡು ಜಾಗವೂ ಇಲ್ಲ. ಬೇಷರತ್ ಕ್ಷಮೆಗೆ ನೋಟಿಸ್ ಕಳುಹಿಸಿದ್ದೇವೆ. ಕ್ಷಮೆಯಾಚಿಸದಿದ್ದರೆ ಕಾನೂನು ಸಂಕಷ್ಟ ಎದುರಿಸಬೇಕಾಗುತ್ತದೆ. ಅಷ್ಟು ಸುಲಭವಾಗಿ ಅವರನ್ನು ಬಿಡುವ ಮಾತೇ ಇಲ್ಲ. ಇನ್ನು ಮುಂದೆ ಲಕ್ಷ್ಮಣ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದೇ ಇಲ್ಲ. ಏನಿದ್ದರೂ ಕಾನೂನಿನ ಮೂಲಕ ಉತ್ತರ ನೀಡುತ್ತೇನೆ ಎಂದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…