ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್‌ಐಆರ್ ದಾಖಲಾಗಿತ್ತು. ಆದರೆ, ಪ್ರಸ್ತುತ ಇಂದಿನಿಂದ ಅಸಲಿ ತನಿಖೆ ಪ್ರಾರಂಭಿಸಿದ್ದು, ಇದರಿಂದ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ಲೋಕಾಯುಕ್ತದಿಂದ ಟೆನ್ಷನ್ ಇಲ್ಲದಂತಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದ ನಾಲ್ಕು ತನಿಖಾ ತಂಡ ಶನಿವಾರವೇ ಚೆಕ್‌ಲಿಸ್ಟ್ ರೆಡಿ ಮಾಡಿಕೊಂಡು ತನಿಖೆಗೆ ಮುಂದಾಗಿದ್ದು, 1935 ರಿಂದ 2021ರವರೆಗೆ ಹಾಗೂ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಬದಲಿ ನಿವೇಶನ ಹಂಚಿಕೆಯಾಗುವರೆಗೂ ಇರುವಂತಹ ಆರಂಭಿಕ ಹಂತದಲ್ಲೇ ದಾಖಲೆ ಸಂಗ್ರಹ ಮಾಡಿಕೊಂಡಿದೆ.
ದಾಖಲೆಗಳನ್ನು 59 ಭಾಗಗಳಾಗಿ ವಿಂಗಡಿಸಲಾಗಿದೆ. ನಂತರ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರೋ 3 ಎಕರೆ 16ಗುಂಟೆ ಜಮೀನಿನ ಮೂಲ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…