Mysore
31
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.

ಈ ಮೂಲಕ ಐ.ಟಿ ಅಧಿಕಾರಿಗಳ ರೇಡ್‌ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಅಧಿಕಾರಿಗಳು ಇ.ಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎನ್ನಲಾಗಿದ್ದು, ಮುಡಾ ಕಚೇರಿಯಲ್ಲಿ ಸಾರ್ವಜನಿಕರ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಇಂದು ಕೂಡ ವಿರಾಮ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದ್ದು, ಜನತೆಯಿಂದ ಆಕ್ರೋಶ ಕೂಡ ವ್ಯಕ್ತವಾಗಿದೆ.

 

 

 

Tags:
error: Content is protected !!