ಮೈಸೂರು: ಮುಡಾ ಪ್ರಕರಣ ತನಿಖೆಯಾಗುತ್ತಿದ್ದು, ಕೆಲವು ನಿವೇಶನಗಳ ದಾಖಲಾತಿಗಳನ್ನು ಸುಟ್ಟು ಹಾಕಿದ್ದಾರೆ. ಹೀಗಾಗಿ 50:50 ಅನುಪಾತದ ಬದಲಿ ನಿವೇಶನಗಳಲ್ಲಿ ಮನೆಗಳನ್ನು ನಿರ್ಮಿಸುವುದಕ್ಕೆ ಅನುಮತಿ ನೀಡಬೇಡಿ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ನಡೆದ ಮುಡಾ ಸಭೆಯಲ್ಲಿ ಮುಡಾದ 50:50 ಅನುಪಾತದ ಬದಲಿ ನಿವೇಶನಗಳ ಕೆಲವು ದಾಖಲೆಗಳು ನಾಪತ್ತೆಯಾಗಿದ್ದು, ಯಾರ್ಯಾರು ನಿವೇಶನ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದರು.
ಮುಡಾ ಸಭೆಯಲ್ಲಿ ಈ ವಿಚಾರ ಹೊರಬಂದ ಕೂಡಲೇ 50:50 ಅನುಪಾತದ ನಿವೇಶನಗಳಲ್ಲಿ ಮನೆ ನಿರ್ಮಿಸಲು ಅನುಮತಿ ನೀಡಬಾರದು. ಜೊತೆಗೆ ಈಗಾಗಲೇ ನಿವಾಸ ನಿರ್ಮಿಸಲು ನೀಲಿನಕ್ಷೆ ತಯಾರಿಸಿ ಅನುಮತಿ ಪಡೆದು ಕಾಮಗಾರಿ ಮಾಡುತ್ತಿರುವವರಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.
ಈ ವಿಚಾರದ ಬಗ್ಗೆ ನನಗೆ ಮಾಹಿತಿ ಇರುವ ಪ್ರಕಾರ 250 ರಿಂದ 300 ಜನರು ನಿವಾಸ ನಿರ್ಮಾಣ ಮಾಡುವುದಕ್ಕೆ ಯೋಜನೆ ರೂಪಿಸಿಕೊಂಡಿದ್ದಾರೆ. ಖಾಲಿ ನಿವೇಶನಗಳಿದ್ದರೆ ಅವುಗಳನ್ನು ಮುಡಾ ಜಪ್ತಿ ಮಾಡಿಕೊಳ್ಳಲು ಸಹಾಯವಾಗುತ್ತದೆ. ಅಲ್ಲದೇ, ಒಂದು ವೇಳೆ ನಿರ್ಮಾಣ ಕಾಮಗಾರಿ ಪ್ರಗತಿ ಹಂತದಲ್ಲಿದ್ದರೆ ಅದನ್ನು ಕಟ್ಟದಂತೆ ತಡೆಯಬೇಕಾಗುತ್ತದೆ. ಹೀಗಾಗಿ ಈ ಎರಡೂ ವಿಚಾರಗಳನ್ನು ಆಲೋಚಿಸಿದ ಬಳಿಕ ನಾನು ಮನವಿ ಪತ್ರ ನೀಡುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…
ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…
ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…