ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ತನಿಖೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಹಿಂದೆ 1095 ಸೈಟ್‌ಗಳು ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ, ತನಿಖೆಗೆ ಮುಂದುವರಿದ ಭಾಗದಲ್ಲಿ ಬರೋಬ್ಬರಿ 4921 ಸೈಟ್‌ಗಳೇ ಅಕ್ರಮ ಅನ್ನೋದು ಬಯಲಾಗಿದೆ.
50:50 ಅನುಪಾರ ಅಷ್ಟೇ ಅಲ್ಲ. 60:40 ಅನುಪಾತದಲ್ಲಿ ಲೇಔಟ್‌ಗೆ ಲೇಔಟ್‌ಗಳಣ್ನೇ ಅಕ್ರಮ ಮಾಡಿದ್ದಾರೆ. ಅದಕ್ಕೆ ಪೂರಕ ದಾಖಲೆ ತಿದ್ದಿದ್ದಾರೆ ಎನ್ನುವುದು ಇ.ಡಿ ತನಿಖೆ ವೇಳೆ ಬಯಲಾಗಿದೆ.
ಇ.ಡಿ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಸತ್ಯ ಬಯಲಾಗಿದೆ. ಇದು 700 ಕೋಟಿಯ ಅಕ್ರಮ ಅಲ್ಲ. 2800 ಕೋಟಿಯ ಅಕ್ರಮ ಎನ್ನಲಾಗಿದ್ದು, 13 ವರ್ಷದಲ್ಲಿ 4,921ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ ಆಗಿದೆ ಎನ್ನಲಾಗುತ್ತಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಆಯುಕ್ತರಿಂದ ಅಕ್ರಮದ ಸರಮಾಲೆ ನಡೆದಿದೆ ಎನ್ನಲಾಗಿದ್ದು, ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸೇರಿ ಅಕ್ರಮ ಲೇಔಟ್‌ಗಳ ನಿರ್ಮಾಣ ನಡೆದಿದೆ ಎನ್ನಲಾಗಿದೆ.
ಈ ಮೂಲಕ ಮುಡಾದಲ್ಲಿ ಭಾರೀ ಗೋಲ್‌ಮಾಲ್ ನಡೆದಿದೆ ಎನ್ನಲಾಗಿದ್ದು, ತನಿಖೆ ನಡೆಯುತ್ತಿದ್ದಂತೆ ಈ ಅಕ್ರಮಗಳು ಮತ್ತಷ್ಟು ಹೊರಬರುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮುಡಾ ಸದ್ದು ಮತ್ತಷ್ಟು ಬಿಸಿ ಬಿಸಿ ಚರ್ಚೆಯಾಗುವ ಸಾಧ್ಯತೆಯಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…