ಮೈಸೂರು ನಗರ

ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದ ಮುಡಾ ಹಗರಣದ ತನಿಖೆಯಾಗಬೇಕು: ಕುರುಬೂರು ಶಾಂತಕುಮಾರ್‌ ಒತ್ತಾಯ

ಮೈಸೂರು: ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ ಕೋಟಿಯ ಹಗರಣ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ದಾರಿ ತಪ್ಪಿಸಬಾರದು. ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದಲೇ ಈ ಪ್ರಕರಣದ ತನಿಖೆ ಆಗಬೇಕು. ನ್ಯಾಯಾಧೀಶರಿಂದಲೇ ತನಿಖೆ ನಡೆಸುವಂತೆ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ತನಿಖೆ ನಡೆದ ಬಳಿಕವೇ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಆಗ್ರಹಿಸಿದರು.

ಈ ಹಗರಣದಲ್ಲಿ ಪ್ರಭಾವಿಗಳು ಹಾಗೂ ಜನಪ್ರತಿನಿಧಿಗಳು ಪಾಲುದಾರರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಆದ್ದರಿಂದ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ಬೇರೆ ಹಗರಣಗಳಂತೆ ಇದನ್ನು ಮುಚ್ಚಿಹಾಕಬಾರದು ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

28 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

58 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

1 hour ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago