ಮೈಸೂರು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ ಕೋಟಿಯ ಹಗರಣ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ದಾರಿ ತಪ್ಪಿಸಬಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಈ ಪ್ರಕರಣದ ತನಿಖೆ ಆಗಬೇಕು. ನ್ಯಾಯಾಧೀಶರಿಂದಲೇ ತನಿಖೆ ನಡೆಸುವಂತೆ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ತನಿಖೆ ನಡೆದ ಬಳಿಕವೇ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಆಗ್ರಹಿಸಿದರು.
ಈ ಹಗರಣದಲ್ಲಿ ಪ್ರಭಾವಿಗಳು ಹಾಗೂ ಜನಪ್ರತಿನಿಧಿಗಳು ಪಾಲುದಾರರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಆದ್ದರಿಂದ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ಬೇರೆ ಹಗರಣಗಳಂತೆ ಇದನ್ನು ಮುಚ್ಚಿಹಾಕಬಾರದು ಎಂದು ಆಗ್ರಹಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…