ಮೈಸೂರು: ನೋಟಿಸ್ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ರಾತ್ರೋರಾತ್ರಿ ಲೋಕಾಯುಕ್ತ ಎಸ್‌ಪಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ನಿನ್ನೆ ಮುಡಾದ ಹಿಂದಿನ ಆಯುಕ್ತ ನಟೇಶ್ ಅವರು ಲೋಕಾಯುಕ್ತ ಎಸ್‌ಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದರು.
ನಟೇಶ್ ವಿಚಾರಣೆ ಮುಗಿದ ಅರ್ಧಗಂಟೆಯ ಬಳಿಕ ಮಲ್ಲಿಕಾರ್ಜುಸ್ವಾಮಿ ಅವರು ಲೋಕಾಯುಕ್ತ ಎಸ್‌ಪಿ ಉದೇಶ್‌ರನ್ನು ಭೇಟಿಯಾಗಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿ ಮೂರನೇ ಆರೋಪಿಯಾಗಿದ್ದು, ರಾತ್ರೋರಾತ್ರಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಬೆಳವಣಿಗೆಗಳ ಮಧ್ಯೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದ್ದು, ರಾತ್ರೋರಾತ್ರಿ ತನಿಖಾಧಿಕಾರಿ ಭೇಟಿ ಮಾಡುವ ಅನಿವಾರ್ಯತೆ ಏನಿತ್ತು? ಒಬ್ಬರನ್ನು ವಿಚಾರಣೆ ಮಾಡಿದ ಬಳಿಕ ವಿಚಾರಣಾಧಿಕಾರಿಯನ್ನು ಆರೋಪಿ ಭೇಟಿ ಮಾಡಿದ್ದು ಯಾಕೆ? ರಾತ್ರಿ ವೇಳೆ ಆರೋಪಿಗೆ ಲೋಕಾಯುಕ್ತ ಕಚೇರಿಗೆ ಬರಲು ಅವಕಾಶ ಕೊಟ್ಟಿದ್ದು ಯಾರು ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…