ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಮುಡಾ ಹಗರಣದ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಆಗುತ್ತದೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಶುಕ್ರವಾರ ಅಥವಾ ಮುಂದಿನ ಸೋಮವಾರ ಮುಡಾ ಹಗರಣದ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಮುಡಾ ಪ್ರಕರಣದ ಬಗ್ಗೆ ಎಲ್ಲಾ ಬೆಳವಣಿಗೆಗಳನ್ನು ನೋಡಿದ್ರೆ ಪ್ರಕರಣವನ್ನು ಮುಂದೂಡುವ ತಂತ್ರ ಅಡಗಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳನ್ನು ಬಹಿರಂಗ ಪಡಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…