ಮೈಸೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ಎಚ್.ಡಿ ಕೋಟೆಯ ಕಬಿನಿ ಡ್ಯಾಂಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆ ಕಬಿನಿ ಡ್ಯಾಂ ಹಿತದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗಿದೆ.
ಈ ಹಿನ್ನೆಲೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರವಾಹನ ಭೀತಿ ಎದುರಾಗಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥಸ್ವಾಮಿ ದೇವಾಲಯ, ಶ್ರೀಬಸವೇಶ್ವರ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ಪರಶುರಾಮ ದೇವಾಲಯ ಹಾಗೂ ದತ್ತಾತ್ರೇಯಸ್ವಾಮಿ ದೇವಾಲಗಳು ಸಂಪೂರ್ಣ ಜಲಾವೃತಗೊಂಡಿವೆ.
ದೇವಾಲಯದ ಸುತ್ತಮುತ್ತ ಪ್ರದೇಶಗಳು ಹಾಗೂ ಹಳ್ಳದ ಕೇರಿಯಲ್ಲಿನ ಕೆಲವು ಮನೆಗಳು ಜಲಾವೃತಗೊಂಡಿದೆ. ಈ ಹಿನ್ನೆಲೆ ಮೈಸೂರು-ನಂಜನಗೂಡು ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.