Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ ಹೊಸ ವರ್ಷವನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ.

ಮೈಸೂರು ನಗರದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನಿರಂತರವಾಗಿ ಕಳೆದ 30 ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ ಹೊದಿಕೆ ವಿತರಣೆ ನೀಡುತ್ತಾ ಬಂದಿದ್ದು, ವರ್ಷದ ಕಡೆಯ ದಿವಸ ಮೋಜು ಮಸ್ತಿ ಮಾಡದೇ ಬಂಡಿಪಾಳ್ಯ ತರಕಾರಿ ಮಾರ್ಕೆಟ್ ಸುತ್ತಮುತ್ತ ಮಲಗಿರುವ ನಿರಾಶ್ರಿತರಿಗೆ ಹೊದಿಕೆಯನ್ನು ನೀಡಿ ವಿಶೇಷವಾಗಿ ವರ್ಷದ ಕೊನೆಯ ದಿವಸವನ್ನು ಆಚರಿಸಿದ್ದಾರೆ.

ಕೆಎಂಪಿಕೆ ಟ್ರಸ್ಟ್ ಗೆ ಯುವಕರು ಕೈಜೋಡಿಸಿ ಲಾರಿ ಕೆಳಗಡೆ ಜೀವನ ಸಾಗಿಸುತ್ತಿರುವ ನಿರಾಶ್ರಿತರ ಬಳಿಗೆ ತೆರಳಿ ಹೊದಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಮುಳುಗಿ ಮೋಜು ಮಸ್ತಿ ಮಾಡಲು ಸ್ನೇಹಿತರೊಡನೆ ಪ್ರವಾಸಿ ಸ್ಥಳಕ್ಕೆ ತೆರಳಿ ಪಟಾಕಿ ಸಿಡಿಸಿ ಕೇಕ್ ಕಟ್ ಮಾಡಿ ಹಾಗೂ ಮೈಮರೆತು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುವ ಇಂತಹ ಸಂದರ್ಭದಲ್ಲೂ 50ಕ್ಕೂ ಹೆಚ್ಚು ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿದ್ದಾರೆ.

 

Tags:
error: Content is protected !!