ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಡಿಸೆಂಬರ್.೨೫ರಂದು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ಟ ಬ್ಲಾಸ್ಟ್ ಆದ ಪರಿಣಾಮ ಮೂವರು ಮೃತಪಟ್ಟಿದ್ದರು. ಈ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.





